ಉಡುಪಿ : ಹಿಜಾಬ್ ಕೇಸರಿ ಶಾಲು ವಿವಾದ ಹಿನ್ನಲೆಯಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಅವರಿಗೆ ಬೆದರಿಕೆ ಕರೆಗಳು ಬಂದಿವೆ ಎಂಬ ಮಾಹಿತಿ ತಿಳಿದುಬಂದಿದೆ.
ವಿದೇಶಗಳಿಂದ, ಹೈದರಾಬಾದ್ ನಿಂದ ಇಂಟರ್ ನೆಟ್ ಕಾಲ್ ಮೂಲಕ ಶಾಸಕ ರಘುಪತಿ ಭಟ್ ಅವರಿಗೆ ಬೆದರಿಕೆ ಕರೆ ಬರುತ್ತಿದ್ದು, ನಿನ್ನನ್ನು ನಾವು ನೋಡಿಕೊಳ್ಳುತ್ತೇವೆ, ಮುಸಲ್ಮಾನರ ವಿರುದ್ಧ ನೀನು ಮೆರೆದಾಡ ಬೇಡ ನಿನ್ನನ್ನು ಹೇಗೆ ನಿಯಂತ್ರಿಸಬೇಕು ಗೊತ್ತಿದೆ ಎಂದು ಕೆಲವು ನಂಬರ್ ಗಳಿಂದ ಫೋನ್ ಕರೆ ಬರುತ್ತಿವೆ. ಈ ಬಗ್ಗೆ ಶಾಸಕರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮೌಖಿಕವಾಗಿ ದೂರು ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಶಾಸಕ ರಘುಪತಿ ಭಟ್, ಇಂತಹ ಹಲವು ಬೆದರಿಕೆಗಳನ್ನು ನಾವು ತುಂಬಾ ನೋಡಿದ್ದೇವೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಗನ್ ಮ್ಯಾನ್ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ. ಆದರೆ ನನಗೆ ಯಾವುದೇ ಗನ್ ಮ್ಯಾನ್ ಬೇಡ. ನನಗೆ ನನ್ನ ಜನಗಳೇ ಭದ್ರತೆಗೆ ಇದ್ದಾರೆ. ಇಂತಹ ಬೆದರಿಕೆ ಕರೆಗಳಿಗೆ ಜಗ್ಗುವ ವ್ಯಕ್ತಿ ನಾನಲ್ಲ ಎಂದು ಹೇಳಿದ್ದಾರೆ.










