ಉಡುಪಿ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ. ಕೂರ್ಮ ರಾವ್ ಅವರು ಇಂದು ಅಧಿಕಾರ ವಹಿಸಿಕೊಂಡರು. ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ ಕೂರ್ಮ ರಾವ್ ಅವರು ಯಾದಗಿರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.
ನಿರ್ಗಮನ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆಯಾಗಿದ್ದರು.










