ಉಡುಪಿಯ ನೂತನ ಜಿಲ್ಲಾಧಿಕಾರಿಯಾಗಿ ಜಿ ಜಗದೀಶ್ ಅಧಿಕಾರ ಸ್ವೀಕಾರ…

232
firstsuddi

ಉಡುಪಿ: ಉಡುಪಿಯ ನೂತನ ಜಿಲ್ಲಾಧಿಕಾರಿಯಾಗಿ ಜಿ ಜಗದೀಶ್ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡರು.ನಿರ್ಗಮನ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರವನ್ನು ಹಸ್ತಾಂತರಿಸಿದರು.ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಜಿ.ಜಗದೀಶ್ ಅವರನ್ನು ಉಡುಪಿ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ವರ್ಗಾವಣೆಯಾಗಿದ್ದು, ಅವರಿಗೆ ಸ್ಥಳ ನಿಯುಕ್ತಿಗೊಳಿಸಿಲ್ಲ.