ಉಡುಪಿಯಲ್ಲಿ ರಾಹುಲ್ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್‍ನಿಂದ ಪ್ರತಿಭಟನೆ…

53
firstsuddi

ಉಡುಪಿ : ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಇಡಿ ವಿಚಾರಣೆ ವಿರೋಧಿಸಿ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಮಣಿಪಾಲದ ಕಾಯಿನ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಪ್ರತಿಭಟನಾ ನಿರತ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ಕೈಗೊಳ್ಳಲಾಗಿತ್ತು.

ಪ್ರತಿಭಟನೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿಗಳಾದ ಅಭಯಚಂದ್ರ ಜೈನ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಜಿಲ್ಲಾ ಅಧ್ಷಕ್ಷ ಅಶೋಕ್ ಕುಮಾರ್ ಕೊಡವೂರು, ಎಮ್. ಎ. ಗಪೂರ್, ದಿನೇಶ್ ಪುತ್ರನ್ˌ ಗೀತಾ ವಾಗ್ಳೆ ˌಮಲ್ಯಾಡಿ ಶಿವರಾಮ ಶೆಟ್ಟಿ, ಬಿ .ನರಸಿಂಹಮೂರ್ತಿ, ಪ್ರಖ್ಯಾತ ಶೆಟ್ಟಿ, ಸರಸು ಬಂಗೇರ,  ಹಿರಿಯಣ್ಣ ಸೇರಿದಂತೆ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.