ಉತ್ತರ ಪ್ರದೇಶ ಹಾಗೂ ದೆಹಲಿಯ ಪೊಲೀಸರು ಹೈದರಾಬಾದ್ ಪೊಲೀಸರನ್ನು ಮಾದರಿಯಾಗಿ ಸ್ವೀಕರಿಸಿ : ಮಾಯಾವತಿ

217
firstsuddi

ಲಕ್ನೋ : ಹೈದರಾಬಾದ್‍ನ ಪಶುವೈದ್ಯೆ ದಿಶಾ ಅವರ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಎನ್‍ಕೌಂಟರ್ ಬಗ್ಗೆ ಪ್ರತಿಕ್ರಯಿಸಿದ ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಅವರು, ಉತ್ತರ ಪ್ರದೇಶ ಹಾಗೂ ದೆಹಲಿಯ ಪೊಲೀಸರು ಹೈದರಾಬಾದ್ ಪೊಲೀಸರನ್ನು ಮಾದರಿಯಾಗಿ ಸ್ವೀಕರಿಸಿ ಎಂದು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಗಳನ್ನು ಎನ್‍ಕೌಂಟರ್ ಮಾಡಿದ್ದಕ್ಕೆ ಹೈದರಾಬಾದ್ ಪೊಲೀಸರಿಗೆ ಅಭಿನಂದನೆಯನೆಯನ್ನು ತಿಳಿಸುತ್ತೇನೆ. ಉತ್ತರ ಪ್ರದೇಶ ಹಾಗೂ ದೆಹಲಿಯ ಪೊಲೀಸರು ಹೈದರಾಬಾದ್ ಪೊಲೀಸರನ್ನು ಮಾದರಿಯಾಗಿ ಸ್ವೀಕರಿಸಬೇಕು. ಆದರೆ ಇಲ್ಲಿ ಕ್ರಿನಿಮಿನಲ್‍ಗಳನ್ನು ರಾಜ್ಯದ ಅಥಿತಿಯಾಗಿ ಸ್ವೀಕರಿಸುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಮಹಿಳೆಯ ಮೇಲೆ ದೌರ್ಜನ್ಯ, ಅತ್ಯಾಚಾರ ಪ್ರಕರಣ ಹೆಚ್ಚಾಗುತ್ತಿದೆ. ಆದರೆ ರಾಜ್ಯ ಸರ್ಕಾರ ನಿದ್ರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.