ಉತ್ತರಪ್ರದೇಶದ ಸಚಿವ ವಿಜಯ್ ಕಶ್ಯಪ್ ಅವರು ಕೊರೊನಾ ಸೋಂಕಿನಿಂದ ನಿಧನ…

133
firstsuddi

ಲಕ್ನೋ : ಉತ್ತರ ಪ್ರದೇಶದ ಕಂದಾಯ ಮತ್ತು ಪ್ರವಾಹ ನಿಯಂತ್ರಣ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯ್‌ ಕಶ್ಯಪ್ (56) ಅವರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ವಿಜಯ್‌ ಕಶ್ಯಪ್ ಅವರಿಗೆ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರಗಾಂವ್ ನ ಮೆದಂತ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾಗಿದ್ದಾರೆ. ಉತ್ತರ ಪ್ರದೇಶದ ಚಾರ್ತವಾಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು.

ಇನ್ನು ವಿಜಯ್ ಕಶ್ಯಪ್ ಅವರ ನಿಧನಕ್ಕೆ ಪ್ರಧಾನಿ ಮೋದಿ, ಕೇಂದ್ರ ಗೃಹಮಂತ್ರಿ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.