ಉಪ ಮುಖ್ಯಮಂತ್ರಿ ಡಾ. ಸಿ.ಎಸ್. ಅಶ್ವತ್ಥನಾರಾಯಣ ಅವರಿಗೆ ಕೊರೊನಾ ಪಾಸಿಟಿವ್…

115
firstsuddi

ಬೆಂಗಳೂರು : ಉಪ ಮುಖ್ಯಮಂತ್ರಿ ಡಾ. ಸಿ.ಎಸ್. ಅಶ್ವತ್ಥನಾರಾಯಣ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಕುರಿತು ಸ್ವತಃ ಅಶ್ವತ್ಥನಾರಾಯಣ ಅವರೇ ತಮ್ಮ ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ. ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದೂ ಡಿಸಿಎಂ ಟ್ವಿಟರ್‌ನಲ್ಲಿ ಮನವಿ ಮಾಡಿದ್ದಾರೆ.