ಉಪಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಬಿಜೆಪಿಯಿಂದಲೇ ಟಿಕೆಟ್ ನೀಡಲಾಗುವುದು : ಬಿ.ಎಸ್. ಯಡಿಯೂರಪ್ಪ

195
firstsuddi

ಶಿವಮೊಗ್ಗ : ಉಪಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಬಿಜೆಪಿಯಿಂದಲೇ ಟಿಕೆಟ್ ನೀಡುತ್ತೇವೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ಜಿಲ್ಲೆಯ ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾದ ಅನರ್ಹ ಶಾಸಕರಿಗೆ ಬಿಜೆಪಿ ಟಕೆಟ್ ನೀಡಲಾಗುವುದು. ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್ ನೀಡುವ ಕುರಿತು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಕೂಡಾ ನಿರ್ಧಾರ ಮಾಡಿದ್ದಾರೆ. ಹೀಗಾಗಿ ಉಪಚುನಾವಣೆಯಲ್ಲಿ ಅನರ್ಹ ಶಾಸಕರನ್ನು ಗೆಲ್ಲಿಸಲು ಆಯಾ ಕ್ಷೇತ್ರದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಶ್ರಮವಹಿಸಬೇಕು. ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. ಇದೇ ವೇಳೆ ಇವಿಎಂ ಬಗ್ಗೆ ನನಗೆ ಅನುಮಾನವಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಯಿಸಿದ್ದು, ಸಿದ್ದರಾಮಯ್ಯ ಗೆದ್ದಾಗ ಇವಿಎಂ ಸರಿಯಿತ್ತು, ಆದರೆ ನಾನು ಗೆದ್ದಾಗ ಇವಿಎಂ ಸಿರಿಯಿಲ್ಲ ಎಂದು ಅನುಮಾನಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಕಿಡಿಕಾರಿದರು.