ಉಪಚುನಾವಣೆಯಲ್ಲಿ ಗೆದ್ದವರಿಗೆ ಬಹುಮಾನ : ಡಿಸಿಎಂ ಅಶ್ವತ್ಥ ನಾರಾಯಣ.

169
firstsuddi

ಕಾರವಾರ : ಉಪಚುನಾವಣೆಯಲ್ಲಿ ಗೆದ್ದವರಿಗೆ ಬಹುಮಾನವಿದೆ ಹಾಗೂ ಸೋತವರ ಬಗ್ಗೆ ಏನು ಮಾಡಬೇಕು ಎಂಬುವುದನ್ನು ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಂ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ 15 ಸ್ಥಾನವನ್ನು ಗೆಲ್ಲುತ್ತೇವೆ ಎಂಬ ನಿರೀಕ್ಷೆ ಇತ್ತು. 12 ಸ್ಥಾನಗಳನ್ನು ಗೆಲ್ಲುವ ಖಚಿತತೆ ಇತ್ತು. ಅದರಂತೆ ನಾವು 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದೇವೆ. ಮತದಾರರು ಒಂದು ಸ್ಥಿರ ಸರ್ಕಾರವನ್ನು ತರುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿಶ್ವಾಸ ತುಂಬಿದ್ದಾರೆ. ಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನವನ್ನು ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಅದೇ ರೀತಿ ಸೋತವರಿಗೆ ಏನು ಮಾಡಬೇಕು ಎಂಬುವುದನ್ನು ಪಕ್ಷ ತೀರ್ಮಾನಿಸುತ್ತದೆ ಎಂದರು.
ಚುನಾವಣೆ ಮುಗಿದ ಬಳಿಕ ಯಡಿಯೂರಪ್ಪ ಅವರು ರಾಜಿನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರು ಹೇಳುತಿದ್ದರು. ಆದರೆ ಈಗಾ ಕಾಂಗ್ರೆಸ್ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದ್ದು, ಸೋಲಿನ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರೇ ರಾಜಿನಾಮೆ ನೀಡಿರುವುದು ಒಳ್ಳೆಯ ಕ್ರಮ. ಇದು ಪ್ರಜಾಪ್ರಭುತ್ವದಲ್ಲಿ ಒಳ್ಳೆಯ ಬೆಳವಣಿಗೆ ಎಂದರು.