ಉಪರಾಷ್ಟ್ರಪತಿ ಚುನಾವಣೆ : ಎನ್‌ಡಿಎ ಅಭ್ಯರ್ಥಿಗೆ ಬೆಂಬಲ ನೀಡಲು ಬಿಎಸ್‌ಪಿ ನಿರ್ಧಾರ…

72
firstsuddi

ಲಕ್ನೋ: ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್‌ಗೆ ಬೆಂಬಲ ನೀಡಲು ಬಿಎಸ್ ಪಿ ನಿರ್ಧರಿಸಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕರ ಹಿತಾಸಕ್ತಿ ಮತ್ತು ತನ್ನ ಸ್ವಂತ ಚಳವಳಿ ನಿಟ್ಟಿನಲ್ಲಿ ಆಗಸ್ಟ್ 6 ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಅವರನ್ನು ಬೆಂಬಲಿಸಲು ಬಿಎಸ್ ಪಿ ನಿರ್ಧರಿಸಿದೆ ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ.

ಜಗದೀಪ್ ಧನಕರ್ ಎನ್ ಡಿಎ ಅಭ್ಯರ್ಥಿಯಾದರೆ, ಮಾರ್ಗರೇಟ್ ಆಳ್ವಾ ವಿರೋಧಪಕ್ಷಗಳ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಆಗಸ್ಟ್ 6ರಂದು ಈ ಚುನಾವಣೆ ನಡೆಯಲಿದೆ.