ಉಪರಾಷ್ಟ್ರಪತಿ ಚುನಾವಣೆ : ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೇಟ್ ಆಳ್ವಗೆ ಟಿಆರ್‌ಎಸ್ ಬೆಂಬಲ…

60
firstsuddi

ಹೈದರಾಬಾದ್: ಉಪರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೇಟ್ ಆಳ್ವ ಅವರನ್ನು ಬೆಂಬಲಿಸಲು ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್) ನಿರ್ಧರಿಸಿದೆ.

ಈ ಸಂಬಂಧ ಟಿಆರ್‌ಎಸ್ ಅಧ್ಯಕ್ಷ ಕೆ.ಚಂದ್ರಶೇಖರ್ ರಾವ್ ಮಾಹಿತಿ ನೀಡಿದ್ದು, ಮಾರ್ಗರೇಟ್ ಆಳ್ವರಿಗೆ ಮತ ಹಾಕುವಂತೆ ಪಕ್ಷದ 16 ಸಂಸದರಿಗೆ ಸೂಚನೆ ನೀಡಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಟಿಆರ್‌ಎಸ್ ವಿರೋಧ ಪಕ್ಷಗಳ ಬೆಂಬಲಿತ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸಿತ್ತು.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಹಾಗೂ ವಿರೋಧ ಪಕ್ಷದ ಅಭ್ಯರ್ಥಿ ಕನ್ನಡತಿ ಮಾರ್ಗರೇಟ್ ಆಳ್ವ ಕಣದಲ್ಲಿದ್ದಾರೆ. ಆಗಸ್ಟ್ 6ರಂದು(ನಾಳೆ) ಚುನಾವಣೆ ನಡೆಯಲಿದ್ದು, ಸಂಜೆಯ ವೇಳೆಗೆ ಫಲಿತಾಂಶ ಹೊರಬೀಳಲಿದೆ.