ನವದೆಹಲಿ : ನೂತನ ಉಪರಾಷ್ಟ್ರಪತಿ ಆಯ್ಕೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ. ಆಗಸ್ಟ್ 6ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆಯಲಿದೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹಾಗು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಜುಲೈ 5ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ಜುಲೈ 19ರಂದು ಉಮೇದುವಾರಿಕೆ ಸಲ್ಲಿಸಲು ಕೊನೆಯ ದಿನವಾಗಿರಲಿದೆ. ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಜುಲೈ 22 ಕೊನೆಯ ದಿನವಾಗಿದೆ.
ವೆಂಕಯ್ಯ ನಾಯ್ಡು ಅವರ ಉಪರಾಷ್ಟ್ರಪತಿ ಅವಧಿ ಆಗಸ್ಟ್ 10ಕ್ಕೆ ಕೊನೆಗೊಳ್ಳಲಿದೆ.










