ಬೆಂಗಳೂರು : ಪ್ರೀತಿಸಿದ ಯುವತಿಯನ್ನು ಪ್ರಿಯಕರನೇ ಹತ್ಯೆ ಮಾಡಿರುವ ಘಟನೆ ನಗರದ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶಾಲಿನಿ ಕೊಲೆಯಾದ ಯುವತಿ. ಶಾಲಿನಿ ಮತ್ತು ಮನೋಜ್ ಇಬ್ಬರು ಪ್ರೀತಿಸುತ್ತಿದ್ದರು. ಆದರೆ ಶಾಲಿನಿಗೆ ಬೇರೆ ಮದುವೆ ನಿಶ್ಚಯವಾಗಿತ್ತು. ಈ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಕೂಡ ಆಗಿತ್ತು. ನಿನ್ನೆ ಸಂಜೆ ಶಾಲಿನಿ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಬಂದಿದ್ದ ಮನೋಜ್ ಮನೆಯವರು ತೋರಿಸಿದ ಹುಡುಗನನ್ನ ನೀನು ಒಪ್ಪಿಕೊಂಡಿದ್ದಿಯಾ ಎಂದು ಗಲಾಟೆ ಮಾಡಿದ್ದಾನೆ. ಬಳಿಕ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ಕೊಲೆ ಮಾಡಿದ ನಂತರ ಅಲ್ಲಿಂದ ಕೆ.ಪಿ ಅಗ್ರಹಾರದ ಮನೆಗೆ ಹೋಗಿದ್ದ ಮನೋಜ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಮನೋಜ್ ನನ್ನು ಕುಟುಂಬದವರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇತ್ತ ಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರಿಗೆ ವೈದ್ಯಕೀಯ ಪರೀಕ್ಷೆಯ ವೇಳೆ ಶಾಲಿನಿ ಹತ್ಯೆಗೂ ಮುನ್ನ ಲೈಂಗಿಕ ಸಂಪರ್ಕವಾಗಿರುವುದು ತಿಳಿದುಬಂದಿದೆ. ಸದ್ಯ ಆರೋಪಿ ಆಸ್ಪತ್ರೆಯಲ್ಲಿರುವುದರಿಂದ ಚೇತರಿಸಿಕೊಂಡ ನಂತರ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.










