ಬೆಂಗಳೂರು/ನವದೆಹಲಿ : ಕರ್ನಾಟಕದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಆದ್ಮಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ನವದೆಹಲಿಯ ಎಎಪಿ ಕಚೇರಿಯಲ್ಲಿ ಇಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿಕೊಂಡಿದ್ದಾರೆ.
ಎಡಿಜಿಪಿ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಆಶಿಸಿ ಕರ್ನಾಟಕ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೇ ಭಾಸ್ಕರ್ ರಾವ್ ಅವರು ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಅಧಿಕೃತವಾಗಿ ಅವರು ಆಪ್ ಗೆ ಸೇರ್ಪಡೆಗೊಂಡಿದ್ದಾರೆ.
ಭಾಸ್ಕರ್ ರಾವ್ ಅವರು ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಅವರು ಕೆಲಸ ಮಾಡಿದ್ದಾರೆ. ರೈಲ್ವೇ ಪೊಲೀಸ್ ವಿಭಾಗದ ಎಡಿಜಿಪಿ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.










