ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಬಳ್ಳಾರಿಯಿಂದಲೇ ಮತ ಚಲಾಯಿಸಲಿದ್ದಾರೆ ರಾಹುಲ್.

75
firstsuddi

ಬಳ್ಳಾರಿ : ಇಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆ ನಡೆಯುತ್ತಿದ್ದು, ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಳ್ಳಾರಿಯಿಂದಲೇ ತಮ್ಮ ಮತ ಚಲಾಯಿಸಲಿದ್ದಾರೆ. ಇಂದು ಭಾರತ್ ಜೋಡೋ ಯಾತ್ರೆಗೆ ತಾತ್ಕಾಲಿಕವಾಗಿ ವಿರಾಮ ನೀಡಲಾಗಿದೆ.

ಬಳ್ಳಾರಿಯ ಸಂಗನಕಲ್ಲಿನಲ್ಲಿ ವಾಸ್ತವ್ಯ ಹೂಡಿರುವ ರಾಹುಲ್ ಗಾಂಧಿ ಅವರಿಗೆ ಆ ಸ್ಥಳದಲ್ಲೇ ಮತ ಚಲಾಯಿಸಲು ಈಗಾಗಲೇ ಎಲ್ಲ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ.

ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ನಡುವೆ ಸ್ಪರ್ಧೆ ನಡೆಯಲಿದ್ದು, ಈ ಬಾರಿ ಯಾರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ. ಅ. 19ರಂದು ಫಲಿತಾಂಶ ಹೊರಬೀಳಲಿದೆ.