ಎನ್ಎಸ್ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಬಂಧನ…

55
firstsuddi

ನವದೆಹಲಿ : ನ್ಯಾಶನಲ್ ಸ್ಟಾಕ್ ಎಕ್ಸ್ ಚೇಂಜ್ (ಎನ್ಎಸ್ಇ)ನ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರನ್ನು ನಿನ್ನೆ ಸಿಬಿಐ ಬಂಧಿಸಿದೆ.

ಚಿತ್ರಾ ರಾಮಕೃಷ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶನಿವಾರ ನ್ಯಾಯಾಲಯ ತಿರಸ್ಕರಿಸಿದ ಬಳಿಕ ಸಿಬಿಐ ಅವರನ್ನು ವಶಕ್ಕೆ ಪಡೆದಿದೆ. ಚಿತ್ರಾ ರಾಮಕೃಷ್ಣ ಅವರು ಹಿಮಾಲಯದಲ್ಲಿ ವಾಸಿಸುವ ನಿಗೂಢ ಯೋಗಿಯೊಂದಿಗೆ ಇಮೇಲ್ ಮೂಲಕ ರಾಷ್ಟ್ರೀಯ ಸ್ಟಾಕ್ ಎಕ್ಸ್ ಚೇಂಜ್ ಬಗ್ಗೆ ಗೌಪ್ಯ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದರು ಎಂದು ಆರೋಪಿಸಲಾಗಿದೆ. ಇನ್ನೂ ಈ ಪ್ರಕರಣದಲ್ಲಿ ಶಾಮೀಲಾಗಿರುವ ಎನ್ಎಸ್ಇಯ ಮಾಜಿ ಸಿಒಒ ಆನಂದ್ ಸುಬ್ರಮಣಿಯನ್ ಅವರನ್ನು ಫೆಬ್ರವರಿ 25ರಂದು ಸಿಬಿಐ ಬಂಧಿಸಿದ್ದು, ಅವರನ್ನು ವಿಚಾರಣೆ ನಡೆಸುತ್ತಿದೆ.

2013ಎಲ್ಲಿ ಸಿಇಒ ಆಗಿ ಅಧಿಕಾರ ಸ್ವೀಕರಿಸಿದ್ದ ಚಿತ್ರಾ ರಾಮಕೃಷ್ಣ 2014ರಿಂದ 2016ರವರೆಗೆ ಎನ್ಎಸ್ಇಯ ಅನೇಕ ಗೌಪ್ಯ ಮಾಹಿತಿಯನ್ನು ಅಪರಿಚಿತ ವ್ಯಕ್ತಿಯೊಬ್ಬನೊಂದಿಗೆ ಹಂಚಿಕೊಂಡಿದ್ದಾರೆ. ಅವರು ಇ-ಮೇಲ್ ಮೂಲಕ ಸಂವಹನ ನಡೆಸುತ್ತಿದ್ದುದಕ್ಕೆ ದಾಖಲೆಗಳ ಪುರಾವೆ ಇದೆ ಎಂದು ಸೆಬಿ ಹೇಳಿತ್ತು.

ಚಿತ್ರಾ ರಾಮಕೃಷ್ಣ ಅವರು 2013 ಮತ್ತು 2016ರ ನಡುವೆ ಎನ್ ಎಸ್ ಇಯ ಸಿಇಒ ಆಗಿ ಸೇವೆ ಸಲ್ಲಿಸಿದ್ದಾರೆ.