ಎರಡು ತಿಂಗಳ ಬಳಿಕ ಉದ್ಯಮಿ ರಾಜ್ ಕುಂದ್ರಾಗೆ ಜಾಮೀನು ಮಂಜೂರು…

85
firstsuddi

ಮುಂಬೈ : ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾಗೆ ಮುಂಬೈ ಕೋರ್ಟ್ ನಿನ್ನೆ ಜಾಮೀನು ಮಂಜೂರು ಮಾಡಿದೆ.

50 ಸಾವಿರ ರೂಪಾಯಿ ಶ್ಯೂರಿಟಿ, ವೈಯಕ್ತಿಕ ಬಾಂಡ್, ತನಿಖಾಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕೆಂದು ಷರತ್ತು ವಿಧೀಸಿ ಜಾಮೀನು ಮಂಜೂರು ಮಾಡಿದ್ದು, ಸುಮಾರು 2 ತಿಂಗಳ ಬಳಿಕ ಇದೀಗ ರಾಜ್ ಕುಂದ್ರಾ ನಿರಾಳರಾಗಿದ್ದಾರೆ.

ಅಶ್ಲೀಲ ಚಿತ್ರ ನಿರ್ಮಾಣ ದಂಧೆ ನಡೆಸುತ್ತಿದ್ದಾರೆ ಎಂಬ ಆರೋಪದಡಿ ಉದ್ಯಮಿ ರಾಜ್ ಕುಂದ್ರಾ ಸೇರಿದಂತೆ ನಾಲ್ವರನ್ನು ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಜುಲೈ 19ರಂದು ಬಂಧಿಸಿದ್ದರು. ಪ್ರಕರಣದಲ್ಲಿ ಕುಂದ್ರಾಅವರ ವಿರುದ್ಧ ಸಾಕಷ್ಟು ಸಾಕ್ಷ್ಯಗಳು ಸಿಕ್ಕಿವೆ ಎಂದು ಪೊಲೀಸರು ತಿಳಿಸಿದ್ದರು.