ಎರಡು ತಿಂಗಳ ಬಳಿಕ ತಾಜ್ ಮಹಲ್ ಓಪನ್ ; ವೀಕ್ಷಣೆಗೆ ಕೆಲವು ಷರತ್ತುಗಳು ಅನ್ವಯ…

66
Firstsuddi

ನವದೆಹಲಿ : ಕೋವಿಡ್ ಕಾರಣದಿಂದಾಗಿ ಮುಚ್ಚಲ್ಪಟ್ಟಿದ್ದ ದೇಶದ ಬಹುತೇಕ ಪ್ರವಾಸಿ ತಾಣಗಳನ್ನು ಇಂದಿನಿಂದ ತೆರೆಯಲು ನಿರ್ಧರಿಸಲಾಗಿದೆ.

ಕೋವಿಡ್ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗ್ರಾದಲ್ಲಿರುವ ಪ್ರೇಮ ಸೌಧ ತಾಜ್ ಮಹಲ್ ಸೇರಿದಂತೆ, ಕೇಂದ್ರ ಸರ್ಕಾರದಿಂದ ಸಂರಕ್ಷಿಸಲ್ಪಡುವ ಎಲ್ಲಾ ಸ್ಮಾರಕಗಳನ್ನು ಇಂದಿನಿಂದ ಮತ್ತೆ ತೆರೆಯಲಾಗುತ್ತಿದ್ದು, ಪ್ರವಾಸಿಗರು ಕಣ್ತುಂಬಿಕೊಳ್ಳಬಹುದಾಗಿದೆ. ಸುಮಾರು 2 ತಿಂಗಳ ಬಳಿಕ ಪ್ರವಾಸಿಗರಿಗೆ ತಾಜ್ ಮಹಲ್ ವೀಕ್ಷಣೆಗೆ ಅವಕಾಶ ನೀಡಲಾಗುತ್ತಿದೆ.

ಇನ್ನು ತಾಜ್ ಮಹಲ್ ವೀಕ್ಷಣೆಗೆ ಕೆಲ ಷರತ್ತುಗಳನ್ನು ವಿಧಿಸಲಾಗಿದೆ. ತಾಜ್ ಮಹಲ್ ಗೆ ಏಕಕಾಲಕ್ಕೆ 650 ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಸ್ಮಾರಕದ ಯಾವುದೇ ಭಾಗವನ್ನು ಮುಟ್ಟುವಂತಿಲ್ಲ. ಭೇಟಿ ನೀಡುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಹಾಗೂ ದೈಹಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಭಾರತೀಯ ಪುರಾತತ್ವ ಇಲಾಖೆ ಸೂಚನೆ ನೀಡಿದೆ.