ಬೆಂಗಳೂರು : ಗೊಂದಲಗಳ ಮಧ್ಯೆ ಹೋಗುವುದಕ್ಕಿಂತ ಸರ್ಕಾರ ವಿಸರ್ಜನೆ ಮಾಡಬೇಕು ಎಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಅವರು ಬಸವರಾಜ ಹೊರಟ್ಟಿಯವರು ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ತಿಳಿಸಿದ್ದಾರೆ. ಸರ್ಕಾರ ವಿಸರ್ಜನೆ ಮಾಡುವುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ದೊಡ್ಡವರಿದ್ದಾರೆ. ಎರಡು ಪಕ್ಷಗಳ ಸಮನ್ವಯಕ್ಕಾಗಿ ಸಮಿತಿಯನ್ನು ರಚಿಸಲಾಗಿದೆ. ಕರ್ನಾಟಕ ಸರ್ಕಾರ ಯಾವ ದಿಕ್ಕಿನಲ್ಲಿ ಹೋಗಬೇಕು ಎಂಬುವುದರ ಬಗ್ಗೆ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರು ಯಾವುದೇ ಕ್ರಮಕೈಗೊಂಡಿಲ್ಲ. ಸರ್ಕಾರ ವಿಸರ್ಜನೆ ಮಾಡುವ ಹಂತಕ್ಕೆ ಕರ್ನಾಟಕದಲ್ಲಿ ಪರಿಸ್ಥಿತಿಯೂ ನಿರ್ಮಾಣವಾಗಿಲ್ಲ ಎಂದು ಹೇಳಿದ್ದಾರೆ.










