ಬೆಳಗಾವಿ : ದೆಹಲಿಯಿಂದ ಬಂದ ಕೆಲವರು ಎರಡೂವರೆ ಸಾವಿರ ಕೋಟಿ ಕೊಡಿ, ನಿಮ್ಮನ್ನು ಸಿಎಂ ಮಾಡ್ತೀವಿ ಅಂತ ಹೇಳಿದ್ರು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.
ರಾಮದುರ್ಗದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, . ನಿಮಗೆ ಟಿಕೆಟ್ ಕೊಡಿಸುತ್ತೇವೆ, ದೆಹಲಿಗೆ ಕರೆದುಕೊಂಡು ಹೋಗುತ್ತೇವೆ. ಸೋನಿಯಾ ಗಾಂಧಿ ಭೇಟಿ ಮಾಡಿಸ್ತೀವಿ, ಜೆ.ಪಿ.ನಡ್ಡಾರನ್ನು ಭೇಟಿ ಮಾಡಿಸ್ತೀವಿ ಅಂತಾ ಹೇಳಿ ಬರ್ತಾರೆ. ಹಾಗೆ ನನ್ನ ಹತ್ತಿರವೂ ದೆಹಲಿಯಿಂದ ಒಂದಿಷ್ಟು ಜನ ಬಂದಿದ್ದರು. ನಿಮ್ಮನ್ನು ಸಿಎಂ ಮಾಡ್ತೀವಿ 2,500 ಕೋಟಿ ರೆಡಿ ಮಾಡಿ ಇಡ್ರಿ ಅಂತಾ ಹೇಳಿದ್ದರು. ಆದ್ರೆ 2,500 ಕೋಟಿ ಅಂದ್ರೆ ಏನ್ ಅಂತಾ ತಿಳಿದಿರಿ. ಆ ಎರಡೂವರೆ ಸಾವಿರ ಕೋಟಿ ಹೆಂಗ್ ಇಡೋದು. ಏನು ಕೋಣೆಯಲ್ಲಿ ಇಡೋದೋ? ಗೋದಾಮಿನಲ್ಲಿ ಇಡೋದೋ? ಹಂಗ ಟಿಕೆಟ್ ಕೊಡ್ತೀನಿ ಅಂತಾ ರಾಜಕಾರಣದಲ್ಲಿ ಎಲ್ಲಾ ಕಡೆ ಮೋಸ ಮಾಡ್ತಾರೆ. ಎಚ್ಚರಿಕೆಯಿಂದ ಇರಬೇಕು ಎಂದರು.
ವಿಜಯಪುರ ಹೆಚ್ಚು ಕಡಿಮೆ ಪಾಕಿಸ್ತಾನ ರೀತಿ ಐತಿ ಅಂತಹ ಮತಕ್ಷೇತ್ರದಲ್ಲಿ ನಾನು ಆರಿಸಿ ಬಂದಿದ್ದೇನೆ. ಏಕೆಂದರೆ ಅವರದ್ದು ಒಂದು ಲಕ್ಷ ವೋಟ್ ಇದ್ರೆ, ನಮ್ದು ಒಂದೂವರೆ ಲಕ್ಷ ವೋಟ್ಗಳಿವೆ. ನಮ್ಮ ಮಂದಿ ವಿಜಯಪುರದಲ್ಲಿ ಹೊರಗೆ ಬರ್ತಿರಲಿಲ್ಲ. ಹೊರಗೆ ಬರದಿದ್ರೆ ಪಾಕಿಸ್ತಾನ ಆಗ್ತೈತಿ ನೋಡಿ ಅಂತಾ ಹೇಳಿದ್ದೆ. ಹೀಗಾಗಿ ಹೊರಗೆ ಬಂದು ನನಗೆ ವೋಟ್ ಹಾಕಿ ಗೆಲ್ಲಿಸಿದ್ದಾರೆ ಎಂದು ಯತ್ನಾಳ್ ಹೇಳಿದರು.










