ಎಲ್​ಇಟಿ ಟಾಪ್ ಕಮಾಂಡರ್ ನ ಹೊಡೆದುರುಳಿಸಿದ ಭದ್ರತಾ ಪಡೆ…

65
firstsuddi

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳು ಇಂದು ನಸುಕಿನ ಜಾವ ಎನ್ ಕೌಂಟರ್ ನಡೆಸಿದ್ದು, ಎನ್ ಕೌಂಟರ್ ನಲ್ಲಿ ಲಷ್ಕರ್ ಇ ತಯ್ಬಾದ ಉನ್ನತ ಕಮಾಂಡರ್ ಯೂಸಫ್ ಕಂಟ್ರೂ ಸೇರಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ.

ಭದ್ರತಾ ಪಡೆಗಳು ಭಯೋತ್ಪಾದಕರನ್ನು ಪತ್ತೆ ಹಚ್ಚಲು ಮೌಲ್ವಾ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದರು. ಈ ವೇಳೆ ಭಯೋತ್ಪಾದಕರನ್ನು ಶರಣಾಗುವಂತೆ ಕೇಳಿದ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಲು ಯತ್ನಿಸಿದ್ದಾರೆ. ಎನ್ ಕೌಂಟರ್ ನಲ್ಲಿ ಮೂವರು ಸೈನಿಕರು ಮತ್ತು ನಾಗರಿಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇತ್ತೀಚೆಗೆ ಭಯೋತ್ಪಾದಕ ಯೂಸುಫ್ ಬಗ್ದಾಮ್ ಜಿಲ್ಲೆಯಲ್ಲಿ ಎಸ್ಪಿಒ ಹಾಗೂ ಅವರ ಸಹೋದರ ಸೇರಿದಂತೆ, ನಾಗರಿಕರು ಹಾಗೂ ಭದ್ರತಾ ಪಡೆಗಳ ಹಲವಾರು ಹತ್ಯೆಗಳಲ್ಲಿ ಭಾಗಿಯಾಗಿದ್ದ. ಎನ್ ಕೌಂಟರ್ ಬಳಿಕ ಭಯೋತ್ಪಾದಕರ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ವಸ್ತುಗಳನ್ನು ವಶಪಡಿಸಿಕೊಳ್ಳಾಗಿದೆ ಎಂದು ಜಮ್ಮು-ಕಾಶ್ಮೀರ ವಲಯ ಇನ್ಸ್ ಪೆಕ್ಟರ್ ಜನರಲ್ ವಿಜಯ್ ಕುಮಾರ್ ತಿಳಿಸಿದ್ದಾರೆ.