ಎಸಿಬಿ ರದ್ದುಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಕೆ – ವಿಚಾರಣೆ ನಡೆಸಲು ಸುಪ್ರೀಂ ಒಪ್ಪಿಗೆ…

93
firstsuddi

ನವದೆಹಲಿ : ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್  ನಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನು ವಿಚಾರಣೆಗೆ ಲಿಸ್ಟ್ ಮಾಡಲು ಮುಖ್ಯ ನ್ಯಾಯಧೀಶ ಎನ್​ವಿ ರಮಣ ಅವರು ಒಪ್ಪಿಗೆ ಸೂಚಿಸಿದ್ದಾರೆ.

ಕನಕರಾಜು ಎಂಬುವವರು ಖಾಸಗಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿದಾರರು ತಮಗೆ ಲಂಚ ಬೇಡಿಕೆ ಇಟ್ಟಿದ್ದ ಬೆಸ್ಕಾಂ ವಿಚಕ್ಷಣಾ ದಳ ಠಾಣೆಯ ಇಬ್ಬರು ಅಧಿಕಾರಿಗಳ ವಿರುದ್ಧ ದೂರು ನೀಡಿದ್ದರು. ಆದರೆ ಈ ಮಧ್ಯೆ ಎಸಿಬಿಯನ್ನು ರದ್ದುಗೊಳಿಸಿದ್ದ ಹೈಕೋರ್ಟ್ ಎಲ್ಲ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ವರ್ಗಾಯಿಸಿತ್ತು.

ಈ ಹಂತದಲ್ಲಿ ಎಸಿಬಿಯನ್ನು ರದ್ದು ಮಾಡಿರುವುದು ತಪ್ಪು. ಕೇಸುಗಳ ತನಿಖೆ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೀಗಾಗಿ ಹೈಕೋರ್ಟ್ ತೀರ್ಪಿಗೆ ತಡೆ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.