ಬೆಂಗಳೂರು : ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್ ಗೆ ನಕಲಿ ವೀಡಿಯೋ ಸೃಷ್ಟಿಸಿ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ ಪ್ರಕರಣ ಕುರಿತಂತೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ಇಂದು ಬೆಳಗ್ಗೆ ಶಾಸಕರ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದರು.
ನನ್ನು ಪುತ್ರಿ ಮೇಲೆ ಆಪಾದನೆಯೊಂದು ಬಂದಿದೆ. ಡಿಸೆಂಬರ್ 25ಕ್ಕೆ ಆಕೆ ತನ್ನ ಸ್ನೇಹಿತ ರಾಕೇಶ್ ಅಣ್ಣಪ್ಪಗೆ ಒಂದು ಬಿಸಿನೆಸ್ ಕಾಂಟ್ಯಾಕ್ಟ್ ಗೆ ಒಂದು ಒಟಿಪಿ ಕೊಟ್ಟಿದಾಳೆ. ಈ ಪ್ರಕರಣ ಕುರಿತಂತೆ ಸಿಸಿಬಿ ಅವರು ರಾಕೇಶ್ ವಿಚಾರಣೆ ನಡೆಸಿದಾಗ, ರಾಕೇಶ್ ಬೆಂಗಳೂರಿನಲ್ಲಿರುವ ರಾಹುಲ್ ಭಟ್ಗೆ ಸಿಮ್ ಒಟಿಪಿ ಕೊಟ್ಟಿರುವುದಾಗಿ ತಿಳಿಸಿದ್ದಾನೆ.
ನಿಶಾಂತ್ ಮತ್ತು ನನ್ನ ಮಗಳು ಕ್ಲಾಸ್ ಮೇಟ್ಸ್ ಅಲ್ಲ. ಇಬ್ಬರಿಗೂ ಕನೆಕ್ಷನ್ ಇಲ್ಲ. ರಾಕೇಶ್ ಅಪ್ಪಣ್ಣ ನನ್ನ ಮಗಳಿಗೆ ಪರಿಚಯ. ಒಟಿಪಿ ನಂಬರ್ ಸೆಂಡ್ ಮಾಡಿದ್ದಕ್ಕೆ ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣವಾಗಿದೆ. ಇದರಲ್ಲಿ ನನ್ನ ಮಗಳ ಪಾತ್ರ ಏನು ಇಲ್ಲ. ನನ್ನ ಮಗಳ ಹೆಸರು ಯಾಕೆ ತಂದಿದ್ದಾರೆ ಅಂತ ಗೊತ್ತಿಲ್ಲ.
ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ನಾನೂ ಉತ್ತಮ ಸ್ನೇಹಿತರು. ನಾವಿಬ್ಬರೂ ಸಿಎಂರನ್ನು ಭೇಟಿ ಮಾಡಿ ಸೂಕ್ತ ತನಿಖೆ ನಡೆಸುವಂತೆ ಮನವಿ ಮಾಡಿದ್ದೇವೆ. ಏನೋ ತಪ್ಪಾಗಿ ಹೀಗೆಲ್ಲಾ ಆಗಿದೆ. ಪ್ರಕರಣದ ಹಿಂದೆ ಇರುವವರನ್ನು ಬಯಲಿಗೆಳೆಯಲಿ. ರಾಜಕಾರಣ ಮಾಡುವವರು ನೇರವಾಗಿ ನನ್ನ ವಿರುದ್ಧ ರಾಜಕಾರಣ ಮಾಡಲಿ. ಮನೆಯವರು, ಮಕ್ಕಳನ್ನು ಇದರಲ್ಲಿ ಎಳೆದು ತರಬೇಡಿ ಎಂದರು.










