ಎಸ್.ನಾರಾಯಣ್ ಕಾಂಗ್ರೆಸ್ ಸೇರ್ಪಡೆ – ಪಕ್ಷಕ್ಕಾಗಿ ದುಡಿಯುತ್ತೇನೆ ಎಂದ ನಿರ್ದೇಶಕ.

92
firstsuddi

ಬೆಂಗಳೂರು : ಕನ್ನಡದ ಖ್ಯಾತ ನಟ, ನಿರ್ದೇಶಕ, ಎಸ್.ನಾರಾಯಣ್ ಹಾಗೂ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ತಿಮ್ಮಯ್ಯ ಪುರ್ಲೆ ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕಾಂಗ್ರೆಸ್ ಸೇರ್ಪಡೆ ಬಳಿಕ ಎಸ್.ನಾರಾಯಣ್ ಮಾತನಾಡಿ, ಕಳೆದ ಮೂರು ದಶಕಗಳಿಂದ ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡಿರುವೆ. ಸಿನಿಮಾ ಕ್ಷೇತ್ರ ನನಗೆ ಎಲ್ಲವು ಕೊಟ್ಟಿದೆ. ನನಗೆ ಬಹಳಷ್ಟು ಮಂದಿ ರಾಜಕೀಯ ಯಾಕೆ ಅಂತ ಪ್ರಶ್ನೆ ಮಾಡಿದರು. ಆ ಪ್ರಶ್ನೆ ಆಗೇ ಇರಲಿ, ಮುಂದೆ ಉತ್ತರ ಸಿಗುತ್ತೆ ಎಂದರು.

ನಾನು ಆಯ್ಕೆ ಮಾಡಿಕೊಂಡಿದ್ದು ಕಾಂಗ್ರೆಸ್ ಪಕ್ಷವನ್ನು. ದೇಶಕ್ಕಾಗಿ ಕಾಂಗ್ರೆಸ್ ತ್ಯಾಗ ಬಲಿದಾನ ಎಲ್ಲವೂ ಕೊಟ್ಟಿದೆ. ಬಡವ, ದಲಿತ, ಹಿಂದುಳಿದವರ ಧ್ವನಿ ಕಾಂಗ್ರೆಸ್. ಜಾತ್ಯತೀತ ಸಿದ್ದಾಂತಗಳು ಇಷ್ಟ ಆಯ್ತು. ಹಾಗಾಗಿ ನಾನು ಕಾಂಗ್ರೆಸ್ ಸೇರಿದೆ. ಪಕ್ಷಕ್ಕಾಗಿ ದುಡಿಯುತ್ತೇನೆ, ಕೊಟ್ಟ ಮಾತಿನಂತೆ ಕೆಲಸ ಮಾಡುತ್ತೇನೆ. ನಮ್ಮಲ್ಲೆರ ಗುರಿ 2023ಕ್ಕೆ ಅಧಿಕಾರಕ್ಕೆ ತರಬೇಕು ಎಂದರು.

 ಡಿ.ಕೆ.ಶಿವಕುಮಾರ್ ಮಾತನಾಡಿ, ಬಹುಮುಖ ಪ್ರತಿಭೆ, ಸರಳ ವ್ಯಕ್ತಿತ್ವದ ನಾರಾಯಣ್ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಸೇರ್ಪಡೆ ಆಗಿದ್ದಾರೆ. ಈ ಹಿಂದೆ ನಾನು ದಿನಾಂಕ ನೀಡಿದ್ದೆ. ಇಂದೇ ಶುಭದಿನ ಎಂದು ನಿರ್ಧಾರ ಮಾಡಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಮುಂದಿನ ದಿನಗಳಲ್ಲಿ ತಮ್ಮ ವಾಣಿಜ್ಯ ಮಂಡಳಿ ಸೇರಿದಂತೆ ಸಮುದಾಯದ ಸಂಘಟನೆ ಮಾಡಲಿದ್ದಾರೆ ಎಂದರು.