ಎಸ್ಎಸ್ಎಲ್ ಸಿ ಪರೀಕ್ಷೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ; ಪರೀಕ್ಷೆಗೆ ಗ್ರೀನ್ ಸಿಗ್ನಲ್…

84
firstsuddi

ಬೆಂಗಳೂರು : ಎಸ್ಎಸ್ಎಲ್ ಸಿ ಪರೀಕ್ಷೆ ರದ್ದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿ ಆದೇಶ ಹೊರಡಿಸಿದೆ.

ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳನ್ನೂ ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕು ಎಂದು ಕೋರಿ ನಗರದ ಜ್ಞಾನಮಂದಿರ ಟ್ರಸ್ಟ್ ನ ಎಸ್.ವಿ.ಸಿಂಗ್ರೇಗೌಡ ಅವರು ಈ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರಾದ ಪ್ರಭುಲಿಂಗ ನಾವದಗಿ ಅವರು ಪೀಠಕ್ಕೆ ಮಾಹಿತಿ ನೀಡಿ, ಎಸ್ಎಸ್ಎಲ್ ಸಿ ಪರೀಕ್ಷೆಗಳನ್ನು ಜುಲೈ 19 ಹಾಗೂ 22ರಂದು ದಿನಕ್ಕೆ ಮೂರು ಸಬ್ಜೆಕ್ಟ್ ಗಳಂತೆ 2 ದಿನಗಳ ಕಾಲ ನಡೆಸಲು ವೇಳಾ ಪಟ್ಟಿ ಪ್ರಕಟಿಸಲಾಗಿದೆ. ಪರೀಕ್ಷೆ ನಡೆಸಲು ಯಾವುದೇ ಸಮಸ್ಯೆಗಳಿಲ್ಲ ಎಂದು ವಿವರಿಸಿದರು.

ಕೋವಿಡ್ ಸೋಂಕು ಕಡಿಮೆ ಇರುವುದರಿಂದ ಪರೀಕ್ಷೆ ನಡೆಸುವುದು ಸೂಕ್ತ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೋರ್ಡ್ ಪರೀಕ್ಷೆ ಬರೆಯಬೇಕು. 3 ಗಂಟೆಗಳ ಬದಲಿಗೆ 1 ಗಂಟೆ ಪರೀಕ್ಷೆ ಇದೆ. ಪರೀಕ್ಷೆ ಬರೆಯದಿರುವುದು ವಿದ್ಯಾರ್ಥಿಗಳಿಗೆ ಬಿಟ್ಟಿದ್ದು, ವಿದ್ಯಾರ್ಥಿಗಳ ಪರವಾಗಿ ಪೋಷಕರು ನಿರ್ಧರಿಸಲಿ. ಈಗ ಬರೆಯದಿದ್ದರೆ ಮುಂದಿನ ವರ್ಷ ಪರೀಕ್ಷೆ ಬರೆಯಲಿ ಎಂದು ಹಿರಿಯ ನ್ಯಾಯಮೂರ್ತಿ ಬಿ.ವಿ ನಾಗರತ್ನ ಹಾಗೂ ನ್ಯಾ. ಹಂಚಾಟೆ ಸಂಜೀವ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಅಭಿಪ್ರಾಯ ಪಟ್ಟಿದ್ದು, ಸರ್ಕಾರದ ನಿರ್ಧಾರದಂತೆ ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ.