ಎಸ್​ಟಿ ಮೀಸಲಾತಿ ಶೇ.10ರಷ್ಟು ಹೆಚ್ಚಿಸಿದ ತೆಲಂಗಾಣ ಸರ್ಕಾರ.

67
firstsuddi

ಹೈದರಾಬಾದ್ : ಪರಿಶಿಷ್ಟ ಪಂಗಡ(ಎಸ್​ಟಿ)ದ ಸಮುದಾಯಗಳ ಮೀಸಲಾತಿಯನ್ನು ಶೇ.6ರಿಂದ ಶೇ.10ರಷ್ಟು ಹೆಚ್ಚಿಸಿ ತೆಲಂಗಾಣ ಸರ್ಕಾರ ಆದೇಶಿಸಿದೆ.

ಇತ್ತೀಚಿಗೆ ನಡೆದ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ತಮ್ಮ ಸರ್ಕಾರವು ಸರ್ಕಾರಿ ಹುದ್ದೆಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಎಸ್​ಟಿ ಸಮುದಾಯಕ್ಕೆ ಶೇ.10 ರಷ್ಟು ಮೀಸಲಾತಿ ಕಲ್ಪಿಸಲಾಗುವುದು ಎಂದು ತಿಳಿಸಿದ್ದರು. ಅದರಂತೆ ಅಧಿಕೃತ ಆದೇಶ ಹೊರಡಿಸಲಾಗಿದೆ.

ತೆಲಂಗಾಣ ವಿಧಾನಸಭೆಯು ಏಪ್ರಿಲ್ 2017ರಲ್ಲಿ ಎಸ್ ಟಿ ಸಮುದಾಯದ ಮೀಸಲಾತಿಯನ್ನು ಶೇಕಡಾ 10ಕ್ಕೆ ಹೆಚ್ಚಿಸುವ ಮಸೂದೆ ಅಂಗೀಕರಿಸಿತ್ತು. ಅದೇ ವರ್ಷ ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಭಾರತ ಸರ್ಕಾರಕ್ಕೆ ಕಳುಹಿಸಲಾಗಿತ್ತು. 6 ವರ್ಷ ಕಳೆದರೂ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ ಸಿಕ್ಕಿಲ್ಲ. ಹೀಗಾಗಿ ಸರ್ಕಾರವೇ ಮೀಸಲಾತಿ ಹೆಚ್ಚಳವನ್ನು ತಕ್ಷಣವೇ ಜಾರಿಗೆ ತರುವಂತೆ ಆದೇಶ ಹೊರಡಿಸಿದೆ.