ಎಸ್​ಸಿ, ಎಸ್​ಟಿ ಮೀಸಲಾತಿ ಹೆಚ್ಚಳ – ಸಂಪುಟ ಸಭೆಯಲ್ಲಿ ಅನುಮೋದನೆ…

70
firstsuddi

ಬೆಂಗಳೂರು : ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಇಂದು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ವಿಧಾನಸೌಧದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಎಸ್​ಟಿ ಗೆ 17% ಹಾಗೂ ಎಸ್​ಸಿ ಗೆ 7% ಮೀಸಲಾತಿ ಹೆಚ್ಚಿಸಲು ಸಮ್ಮತಿ ಸೂಚಿಸಲಾಗಿದೆ. ಈ ಸಂಬಂಧ ಸರ್ಕಾರಿ ಆದೇಶ ಹೊರಡಿಸಲು ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಎರಡು ಮೂರು ದಿನಗಳಲ್ಲಿ ಸರ್ಕಾರಿ ಆದೇಶ ಹೊರಬೀಳಲಿದೆ. ಸರ್ಕಾರಿ ಆದೇಶದಲ್ಲಿ ಯಾವ ರೀತಿ ಮೀಸಲಾತಿ ಕಲ್ಪಿಸಲಾಗುತ್ತೆ ಎಂಬ ಬಗ್ಗೆ ವಿವರವಾಗಿ ಉಲ್ಲೇಖಿಸಲಾಗುತ್ತದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ತಿಳಿಸಿದರು.

ಬೇರೆ ಸಮುದಾಯದವರಿಗೆ ಮೀಸಲಾತಿ ಬಗ್ಗೆನೂ ಚರ್ಚೆ ಮಾಡುತ್ತೇವೆ. ಈ ಸಚಿವ ಸಂಪುಟ ಸಭೆಯಲ್ಲಿ ಆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ವೈಜ್ಞಾನಿಕವಾಗಿ ಚರ್ಚೆಯಾಗದೇ, ಆಯೋಗ ಶಿಫಾರಸು ಇಲ್ಲದೇ ಬೇರೆ ಸಮುದಾಯಗಳಿಗೆ ಮೀಸಲಾತಿ ಕೊಡಲು ಆಗುವುದಿಲ್ಲ ಎಂದು ತಿಳಿಸಿದರು.