ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ-ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ, ಯಾದಗಿರಿಗೆ ಕೊನೆಯ ಸ್ಥಾನ…

120
firstsuddi

ಬೆಂಗಳೂರು : ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಎಸ್‍ಎಸ್‍ಎಲ್‍ಸಿ ಫಲಿತಾಂಶವನ್ನು ಇಂದು ಮಧ್ಯಾಹ್ನ ಶಿಕ್ಷಣ ಸಚಿವ ಸಚಿವ ಸುರೇಶ್ ಕುಮಾರ್ ಅವರು ಪ್ರಕಟಿಸಿದರು. ಈ ಬಾರಿ ಒಟ್ಟು 5,82,316 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಒಟ್ಟು 71.80% ಫಲಿತಾಂಶ ದಾಖಲಾಗಿದೆ. ಈ ಬಾರಿ ಫಲಿತಾಂಶದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.