ಏ. 1ರಂದು ಕರ್ನಾಟಕಕ್ಕೆ ಅಮಿತ್ ಶಾ ಭೇಟಿ : ಸಿಎಂ ಬೊಮ್ಮಾಯಿ.

67
firstsuddi

ಹುಬ್ಬಳ್ಳಿ : ಏಪ್ರಿಲ್ 1ರಂದು ಅಮಿತ್ ಶಾ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಸಹಕಾರಿ ಇಲಾಖೆಯ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಇಂದು ನನ್ನ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ತೆರಳುತ್ತಿದ್ದೇನೆ. ಬಜೆಟ್ ನಲ್ಲಿ ಘೋಷಣೆಯಾದ ಎಲ್ಲ ಯೋಜನೆಗಳ ಅನುಷ್ಠಾನಕ್ಕೆ ವಿಶೇಷ ಸಮಿತಿ ರಚನೆ ಮಾಡಲಾಗಿದೆ. ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದೇವೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನವೆಂಬರ್ ನಲ್ಲಿ ಕೈಗಾರಿಕಾ ಸಚಿವರ ನೇತೃತ್ವದಲ್ಲಿ ನಡೆಯಲಿದ್ದು, ಅದರ ಸಿದ್ಧತೆ ಭರದಿಂದ ಸಾಗುತ್ತಿದೆ. ವಿದೇಶಿ ಬಂಡವಾಳ ಆಕರ್ಷಣೆಯಲ್ಲಿ ರಾಜ್ಯ ನಂಬರ್ 1 ಆಗಿದೆ. ಕಳೆದ ಮೂರು ತ್ರೈಮಾಸಿಕ ಅವಧಿಯಲ್ಲಿ ನಾವೇ ನಂಬರ್ ಒನ್ ಇದ್ದೇವೆ ಎಂದರು.

ಏಪ್ರಿಲ್ ಒಂದಕ್ಕೆ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ. ಕ್ಷೀರ ಬ್ಯಾಂಕ್, ಯಶಸ್ವಿನಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಏಪ್ರಿಲ್ 5ರಂದು ನರೇಂದ್ರ ಮೋದಿ ರಾಜ್ಯಕ್ಕೆ ಬರುವ ನಿರೀಕ್ಷೆ ಇದೆ. ಪ್ರಧಾನಮಂತ್ರಿಗಳು ರಾಜ್ಯಕ್ಕೆ ಭೇಟಿ ನೀಡುವುದು ಇನ್ನೂ ಅಧಿಕೃತವಾಗಿಲ್ಲ. ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುವುದಿಲ್ಲ. ವರಿಷ್ಠರು ಕರೆ ಕೊಟ್ಟರೆ ನಾನೇ ದೆಹಲಿಗೆ ಹೋಗುತ್ತೇನೆ ಹೇಳಿದರು.