ಏಷ್ಯನ್ ಗೇಮ್ಸ್ 2023- ಈಕ್ವೆಸ್ಟ್ರೀಯನ್ ವೈಯಕ್ತಿಕ ಡ್ರೆಸ್ಸೇಜ್ ವಿಭಾಗದಲ್ಲಿ ಭಾರತಕ್ಕೆ ಕಂಚು…

49
firstsuddi

ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ನ ಈಕ್ವೆಸ್ಟ್ರೀಯನ್ (ಕುದುರೆ ಸವಾರಿ) ವೈಯಕ್ತಿಕ ಡ್ರೆಸ್ಸೇಜ್ ವಿಭಾಗದಲ್ಲಿ ಭಾರತದ ಅನುಷ್ ಅಗರ್ವಾಲಾ ಕಂಚಿನ ಪದಕ ಪಡೆದುಕೊಂಡಿದ್ದಾರೆ.

ಇದು ಈಕ್ವೆಸ್ಟ್ರೀಯನ್(ಕುದುರೆ ಸವಾರಿ) ಸ್ಪರ್ಧೆಯಲ್ಲಿ ಭಾರತಕ್ಕೆ ಸಿಕ್ಕ ಮೊದಲ ಪದಕವಾಗಿದೆ. ನಿನ್ನೆ ನಡೆದ ಅರ್ಹತಾ ಸುತ್ತಿನಲ್ಲಿ 71.706 ಅಂಕಗಳೊಂದಿಗೆ 4ನೇ ಸ್ಥಾನ ಪಡೆದು 15 ಮಂದಿ ಪ್ರತಿನಿಧಿಸುವ ಫೈನಲ್ ಸುತ್ತಿಗೆ ಅರ್ಹತೆ ಪಡೆದಿದ್ದರು. ಇಂದು ನಡೆದ ಫೈನಲ್‌ನಲ್ಲಿ 73.030 ಅಂಕ ಪಡೆದು ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಇದೇ ಸ್ಪರ್ಧೆಯಲ್ಲಿ ಕಣಕ್ಕಿಳಿದಿದ್ದ ಭಾರತದ ಮತ್ತೋರ್ವ ಕುದುರೆ ಸವಾರ ಹೃದಯ್ ವಿಪುಲ್ ಪದಕ ಗೆಲ್ಲುವಲ್ಲಿ ವಿಫಲರಾಗಿದ್ದಾರೆ. ಅರ್ಹತಾ ಸುತ್ತಿನಲ್ಲಿ 73.8873 ಅಂಕಗಳಿಸಿ ಫೈನಲ್ ಪ್ರವೇಶಿಸಿದ್ದ ಹೃದಯ್ ಫೈನಲ್‌ನಲ್ಲಿ ಇದೇ ಪ್ರದರ್ಶನ ಮುಂದುವರಿಸುವಲ್ಲಿ ವಿಫಲರಾಗಿದ್ದಾರೆ.