ಐಎಂಎ ಪ್ರಕರಣವನ್ನು ಸಿಸಿಬಿಗೆ ಒಪ್ಪಿಸಿದ ರಾಜ್ಯ ಸರ್ಕಾರ…

259
firstsuddi

ಬೆಂಗಳೂರು : ಐಎಂಎ ಜ್ಯುವೆಲ್ಲೆರ್ಸ್ ಮಾಲಿಕ ಮನ್ಸೂರ್ ಖಾನ್ ಅವರು ಸಾವಿರಾರು ಹೂಡಿಕೆದಾರರಿಗೆ ವಂಚನೆ ಮಾಡಿ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದು, ಐಎಂಎ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಹೂಡಿಕೆದಾರರ ಆತಂಕವನ್ನು ಸರ್ಕಾರ ಅರ್ಥ ಮಾಡಿಕೊಂಡಿದ್ದು ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಗೃಹ ಸಚಿವರಾದ ಎಂ.ಬಿ ಪಾಟೀಲ್ ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದು ಪ್ರಕರಣವನ್ನು ಶೀಘ್ರ ಇತ್ಯರ್ಥಗೊಳಿಸಲು ಸೂಚಿಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

firstsuddi