ಐಎಂಎ ವಂಚನೆ ಪ್ರಕರಣ-ರೋಷನ್ ಬೇಗ್ ಅವರನ್ನು ಮತ್ತೆ ಸಿಬಿಐ ವಶಕ್ಕೆ ನೀಡಿ ಕೋರ್ಟ್ ಆದೇಶ…

137
firstsuddi

ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ರೋಷನ್ ಬೇದ ಅವರನ್ನು ಮತ್ತೆ ಸಿಬಿಐ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ರೋಷನ್ ಬೇಗ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಇಂದು ನ್ಯಾಯಾಲಯ ಕೈಗೆತ್ತಿಕೊಂಡಿತ್ತು. ಈ ವೇಳೆ ಸಿಬಿಐ ಪರ ವಕೀಲರು ರೋಷನ್ ಬೇಗ್ ಅವರಿಂದ ಇನ್ನೂ ಮಾಹಿತಿಗಳು ಪಡೆಯುವ ಅವಶ್ಯಕತೆ ಇದೆ. ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ಸೇರಿದ್ದರಿಂದ ವಿಚಾರಣೆ ನಡೆಸಲು ಸಾಧ್ಯವಾಗಿಲ್ಲ. ಈ ಪ್ರಕರಣದಲ್ಲಿ ರೋಷನ್ ಬೇಗ್ ಅವರಿಗೆ ಹಣ ವರ್ಗಾವಣೆಯಾಗಿರುವ ಕುರಿತು ಮಾಹಿತಿ ತಿಳಿದು ಬಂದಿದೆ. ಆದ್ದರಿಂದ ರೋಷನ್ ಬೇಗ್ ಅವರನ್ನು ತಮ್ಮ ವಶಕ್ಕೆ ನೀಡುವಂತೆ ಕೇಳಿಕೊಂಡಿದ್ದರು. ವಾದವನ್ನು ಆಲಿಸಿದ ನ್ಯಾಯಾಮೂರ್ತಿಗಳು ರೋಷನ್ ಬೇಗ್ ಅವರನ್ನು ನಾಳೆ ಸಂಜೆ 5 ಗಂಟೆವರೆಗೂ ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.