ಐದು ವರ್ಷದ ಪುಟ್ಟ ಬಾಲಕಿ ಮೇಲೆ ಅತ್ಯಾಚಾರ!

72
firstsuddi

ಭುವನೇಶ್ವರ್ : ಐದು ವರ್ಷದ ಪುಟ್ಟ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಪುರಿ ಪಟ್ಟಣದಲ್ಲಿ ನಡೆದಿದೆ.

ಕುಟುಂಬಕ್ಕೆ ಪರಿಚಯವಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿ ಯಾರೂ ಇಲ್ಲದಿರುವ ವೇಳೆ ಬಾಲಕಿಯನ್ನು ಮನೆಯ ಟೆರೇಸ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಮನೆಗೆ ಬಂದ ಬಾಲಕಿಯ ಅಮ್ಮ ಮಗಳ ಕಿರುಚಾಟವನ್ನು ಕೇಳಿ ಟೆರೇಸ್ ಗೆ ಹೋಗಿ ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಆದರೆ ಆರೋಪಿ ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ.

ತಕ್ಷಣವೇ ಬಾಲಕಿಯನ್ನು ಪುರಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಆಕೆಯ ಸ್ಥಿತಿ ಚಿಂತಾಜನಕವಾಗಿದ್ದು, ಕಟಕ್ ನಲ್ಲಿರುವ ಎಸ್ ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಲು ನಾಲ್ಕು ಪ್ರತ್ಯೇಕ ತಂಡಗಳನ್ನು ರಚಿಸಿದ್ದಾರೆ.