ಐದೇ ದಿನಕ್ಕೆ ಮೊಟಕುಗೊಂಡ ಕಾಂಗ್ರೆಸ್ ಮೇಕೆದಾಟು ಪಾದೆಯಾತ್ರೆ…

54
firstsuddi

ಬೆಂಗಳೂರು : ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿದ್ದ ಪಾದಯಾತ್ರೆಯನ್ನು ಕಾಂಗ್ರೆಸ್ ನಾಯಕರು ಐದೇ ದಿನಕ್ಕೆ ಮೊಟಕುಗೊಳಿಸಿದ್ದಾರೆ.

ಸರ್ಕಾರದ ಆದೇಶ ಮತ್ತು ಹೈಕೋರ್ಟ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಇಂದು ರಾಮನಗರ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಸಭೆಯನ್ನು ಕರೆಯಲಾಗಿತ್ತು. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ತೀರ್ಮಾನ ಮಾಡಲಾಗಿದ್ದು, ಹೈಕಮಾಂಡ್ ಆದೇಶದಂತೆ ತಾತ್ಕಾಲಿಕವಾಗಿ ಪಾದಯಾತ್ರೆ ನಿಲ್ಲಿಸುವ ನಿರ್ಧಾರ ಕೈಗೊಳ್ಳಲಾಗಿದೆ. 

ಪಕ್ಷದ ನಾಯಕರ ಜೊತೆ ಸಭೆ ನಡೆಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ತೀರ್ಮಾನದಂತೆ ಜ.9ರಂದು ಸಂಗಮದಿಂದ ಪ್ರಾರಂಭ ಆಯ್ತು. ನಮ್ಮ ಮುಖಂಡರು ಕಾರ್ಯಕರ್ತರು ಪಾದಯಾತ್ರೆ ಯಶಸ್ವಿಯಾಗಿ ಮಾಡಿದ್ದೇವೆ. ಇಂದಿನಿಂದ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಬೇಕಿತ್ತು. ಕೋವಿಡ್ ವೇಗವಾಗಿ ಹರಡುತ್ತಿದೆ. ಇದರಿಂದ ಮೊಟಕುಗೊಳಿಸಿದ್ದೇವೆ. ಮುಂದಿನ ದಿನಗಳಲ್ಲಿ ಮೇಕೆದಾಟು ಪಾದಯಾತ್ರೆ ಮಾಡೇ ಮಾಡುತ್ತೇವೆ. ಸರ್ಕಾರದ ಬೆದರಿಕೆಯಿಂದ ಪಾದಯಾತ್ರೆ ವಾಪಸ್ ಪಡೆಯುತ್ತಿಲ್ಲ. ಜನರ ಆರೋಗ್ಯದ ದೃಷ್ಟಿಯಿಂದ ಪಾದಯಾತ್ರೆ ಹಿಂದಕ್ಕೆ ಪಡೆಯಲಾಗಿದೆ ಎಂದಿದ್ದಾರೆ.