ನವದೆಹಲಿ : ಈ ವರ್ಷದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಕಳಪೆ ಆಟವಾಡುತ್ತಿದ್ದಾರೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ವಿಕೃತ ಮನಸ್ಸಿನ ಕೆಲವರು ಧೋನಿ ಅವರು ಈ ಬಾರಿ ಐಪಿಎಲ್ ಪಂದ್ಯಗಳಲ್ಲಿ ತಂಡವನ್ನು ಗೆಲುವಿನ ಕಡೆಗೆ ತೆಗೆದುಕೊಂಡು ಹೋಗುವಲ್ಲಿ ವಿಫಲವಾಗಿದ್ದರಿಂದ ತಮ್ಮ 5 ವರ್ಷದ ಪುಟ್ಟ ಮಗಳನ್ನು ಅತ್ಯಾಚಾರ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದಾರೆ.
ಕಳೆದ ಬುಧವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಡುವಿನ ಪಂದ್ಯದಲ್ಲಿ ಚೆನ್ನೈ ತಂಡ ಹೀನಾಯವಾಗಿ ಸೋಲು ಕಂಡಿತ್ತು. ಇದರಿಂದ ಆಕ್ರೋಶಗೊಂಡ ಕೆಲವು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಈ ನಡುವೆ ವಿಜಯ್ ಎಂಬ ವ್ಯಕ್ತಿ ಧೋನಿ ಮಗಳನ್ನು ಅತ್ಯಾಚಾರ ಮಾಡಬೇಕು ಎಂದು ಟ್ವಿಟರ್‍ನಲ್ಲಿ ಬರೆದುಕೊಂಡಿದ್ದಾರೆ. ಅದಲ್ಲದೇ ಅಸಭ್ಯ ಪದಗಳನ್ನು ಬಳಸಿ ಝೀವಾ ಹೆಸರಲ್ಲಿ ಕಮೆಂಟ್ ಮಾಡಿದ್ದಾರೆ.
ಕೆಲವರು ದೇಶಕ್ಕಾಗಿ ಮೂರು ಐಸಿಸಿ ಟ್ರೋಫಿಗಳನ್ನು ಗೆದ್ದುಕೊಟ್ಟ ನಾಯಕನಿಗೆ ಒಂದು ಪಂದ್ಯದಲ್ಲಿ ಕೆಟ್ಟ ಪ್ರದರ್ಶನ ನೀಡಿದ್ದಾರೆ ಎಂಬ ಮಾತ್ರಕ್ಕೆ ಈ ರೀತಿ ಮಾತನಾಡಬಾರದು. ಈ ಪಂದ್ಯದ ವಿಚಾರದಲ್ಲಿ ಪುಟ್ಟ ಮಗುವಿಗೆ ಬೆದರಿಕೆ ಹಾಕುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.










