ಒಂದು ರಾಷ್ಡ್ರ, ಒಂದು ಚುನಾವಣೆ ಚರ್ಚೆ- ಎರಡನೇ ದಿನವೂ ಸದನದಲ್ಲಿ ಗದ್ದಲ, ಕಲಾಪ ಮುಂದೂಡಿಕೆ!

97
Firstsuddi

ಬೆಂಗಳೂರು : ‘ಒಂದು ರಾಷ್ಟ್ರ, ಒಂದು ಚುನಾವಣೆ’ ವಿಷಯದ ಬಗ್ಗೆ ಚರ್ಚಿಸಲು ಸ್ಪೀಕರ್ ವಿಶೇಶ್ವರ ಹೆಗಡೆ ಕಾಗೇರಿ ಅವರು ಅನುಮತಿ ನೀಡಲು ಮುಂದಾದಾಗ ಕಾಂಗ್ರೆಸ್ ಸದಸ್ಯರು ವಿರೋಧಿಸಿದರು.

ಶಾಸಕ ಸಂಗಮೇಶ್ ಅವರ ಅಮಾನತನ್ನು ಹಿಂದಕ್ಕೆ ಪಡೆಯಿರಿ. ಇಲ್ಲವೇ ನಮ್ಮನ್ನೆಲ್ಲಾ ಅಮಾನತು ಮಾಡಿ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದರು. ಸರ್ವಾಧಿಕಾರ ಧೋರಣೆಗೆ ಧಿಕ್ಕಾರ ಎಂದು ಕಾಂಗ್ರೆಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ಪ್ರತ್ಯುತ್ತರ ನೀಡಿದ ಸಭಾಧ್ಯಕ್ಷ ವಿಶೇಶ್ವರ ಹೆಗಡೆ ಕಾಗೇರಿ ಅವರು ಉಳಿದ ಶಾಸಕರಿಗೆ ಮಾತನಾಡಲು ಅವಕಾಶ ಕೊಡಿ. ಅವರ ಹಕ್ಕನ್ನು ನೀವು ಕಿತ್ತಕೊಳ್ಳಬೇಡಿ. ನಾವೆಲ್ಲರೂ ಇಲ್ಲಿ ಚರ್ಚೆ ಮಾಡಲೆಂದೇ ಸೇರಿದ್ದೇವೆ. ಈ ರೀತಿ ಸದನದಲ್ಲಿ ಕಾರ್ಯ ಕಲಾಪಗಳಿಗೆ ಅಡ್ಡಿಪಡಿಸುವುದು ಒಳ್ಳೆಯದಲ್ಲ. ಸದನದ ಘನತೆ, ಗೌರವಕ್ಕೆ ಧಕ್ಕೆಯಾಗುವ ಹಾಗೆ ಶಾಸಕ ಸಂಗಮೇಶ್ ಅವರು ನಡೆದುಕೊಂಡಿದ್ದಾರೆ. ಹಿರಿಯ ನಾಯಕರಾಗಿ ನೀವು ಹೀಗೆ ನಡೆದುಕೊಳ್ಳಬಾರದು. ಎಂದು ಸಭಾಧ್ಯಕ್ಷ ವಿಶೇಶ್ವರ ಹೆಗಡೆ ಕಾಗೇರಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಹೇಳಿದರು.

ಆದರೆ ಇದ್ಯಾವುದನ್ನು ಲೆಕ್ಕಿಸದೇ ಪ್ರತಿಪಕ್ಷ ನಾಯಕರು ಸದನದ ಬಾವಿಗಿಳಿದು ಹೋರಾಟ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ಕಾರಣದಿಂದಾಗಿ ವಿಧಾನಸಭೆ ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಗಿದೆ.