ಒಂದೇ ಕುಟುಂಬದ ಒಂಬತ್ತು ಮಂದಿ ಶವವಾಗಿ ಪತ್ತೆ…

62
firstsuddi

ಮುಂಬೈ : ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮಹೈಸಾಲ್ ಗ್ರಾಮದ ಒಂದೇ ಕುಟುಂಬದ ಒಂಬತ್ತು ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ. ಕುಟುಂಬದವರೆಲ್ಲರೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ. ಆದರೆ, ಇಷ್ಟೊಂದು ಜನರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೀರಜ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.

ಈ ಕುರಿತು ಸಾಂಗ್ಲಿ ಪೊಲೀಸ್ ವರಿಷ್ಠಾಧಿಕಾರಿ ದೀಕ್ಷಿತ್ ಗೆಡಂ ಅವರು ಮಾತನಾಡಿ, ಸ್ಥಳೀಯರು ಮಾಹಿತಿ ನೀಡಿದ ನಂತರ ನಾವು ಸ್ಥಳಕ್ಕೆ ಬಂದು ನೋಡಿದ ಮೇಲೆ ಪ್ರಕರಣ ಬೆಳಕಿಗೆ ಬಂದಿದೆ. ಮೂವರ ಮೃತದೇಹವು ಒಂದು ಕಡೆ ಸಿಕ್ಕರೆ, ಉಳಿದ 6 ದೇಹಗಳು ಮನೆಯ ಬೇರೆ-ಬೇರೆ ಪ್ರದೇಶಗಳಲ್ಲಿ ದೊರೆತಿದೆ. ಒಟ್ಟು 9 ಮೃತದೇಹಗಳು ಒಂದೇ ಮನೆಯಲ್ಲಿ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಈ ಸಾವಿಗೆ ನಿಖರವಾದ ಕಾರಣ ತಿಳಿಯಲಿದೆ ಎಂದರು.