ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ…

44
firstsuddi

ಬೆಂಗಳೂರು: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಜೆ.ಪಿ.ನಗರದ 3ನೇ ಹಂತದಲ್ಲಿ ನಡೆದಿದೆ.

ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್, ನಿಶಿತ್ (28) ಮೃತ ದುರ್ದೈವಿಗಳು. ಉಡುಪಿ ಮೂಲದ ಅಂಬಲಪಾಡಿ ನಿವಾಸಿಗಳಾಗಿರುವ ಕುಟುಂಬ, ಜೆಪಿ ನಗರದಲ್ಲಿ ವಾಸವಾಗಿದ್ದರು. ನಿನ್ನೆ ಸಂಜೆ ಮನೆಯಲ್ಲಿ ಪತಿ ಇಲ್ಲದ ಸಮಯದಲ್ಲಿ ಮನೆಗೆ ಬಂದ ಬ್ಯಾಂಕ್ ಸಿಬ್ಬಂದಿಗಳು ಸಾಲ ವಾಪಾಸ್ ಕೇಳಿದ್ದರಂತೆ. ಖಾಸಗಿ ಬ್ಯಾಂಕ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಜೆ.ಪಿ.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರು ಮತ್ತು ಸಂಬಂಧಿಕರಿಂದ ಮಾಹಿತಿ ಪಡೆಯುತ್ತಿದ್ದಾರೆ.