ಭುವನೇಶ್ವರ್: ಒಡಿಶಾದ ಬಾಲಸೋರ್ ನಲ್ಲಿ ನಡೆದ ಭೀಕರ ರೈಲು ದುರಂತದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದಾರೆ.
ಪ್ರಧಾನಿ ಮೋದಿ ಅವರು ಇಂದು ಮಧ್ಯಾಹ್ನ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಬಾಲಸೋರ್ ಗೆ ಆಗಮಿಸಿ, ಅಲ್ಲಿಂದ ಬಹನಾಗಾ ಬಜಾರ್ ನಿಲ್ದಾಣದಲ್ಲಿ ನಡೆದ ಅಪಘಾತ ಸ್ಥಳಕ್ಕೆ ಭೇಟಿ ನೀಡಿದರು.
ಪ್ರಧಾನಿ ಮೋದಿ ಅವರು ಬಾಲಸೋರ್ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಪ್ರಧಾನಿ ಮೋದಿಗೆ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಹಿರಿಯ ಅಧಿಕಾರಿಗಳು ಸಾಥ್ ನೀಡಿದರು. ಘಟನಾ ಸ್ಥಳದಲ್ಲಿ ಅಧಿಕಾರಿಗಳು ಮತ್ತು ರಕ್ಷಣಾ ಸಿಬ್ಬಂದಿಯಿಂದ ಪ್ರಧಾನಿ ಮೋದಿ ಮಾಹಿತಿ ಪಡೆದುಕೊಂಡರು.
ರೈಲು ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಸಾವಿನ ಸಂಖ್ಯೆ 300ಕ್ಕೆ ಏರಿಕೆಯಾಗಿದೆ. ರೈಲು ಅಪಘಾತದಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










