ಒಡಿಶಾದಲ್ಲಿ ಬಸ್ ಪಲ್ಟಿಯಾಗಿ ಇಬ್ಬರು ಮೃತಪಟ್ಟಿರುವ ದುರಂತ ಘಟನೆ ಸಂಭವಿಸಿದ್ದು, 30ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಂಗುಲ್‍ನಿಂದ ಬರಿಪಾಡಾಗೆ ತೆರಳುತ್ತಿದ್ದ ಬಸ್ 50 ರಿಂದ 60 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ರಸ್ತೆಯಿಂದ ಸ್ಕಿಡ್ ಆಗಿದೆ. ಭಾನುವಾರ ಅಂಗುಲ್ ಜಿಲ್ಲೆಯ ಗಹಾಮ್ ಬಳಿ ಒಡಿಶಾ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿತ್ತು. ಪೊಲೀಸರು ಮತ್ತು ಸ್ಥಳೀಯರ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಿದ ಗಂಭೀರವಾಗಿ ಗಾಯಗೊಂಡಿರುವ 30 ಕ್ಕೂ ಹೆಚ್ಚು ಪ್ರಯಾಣಿಕರನ್ನು ಆಸ್ಪತ್ರೆಗೆ ಕಳುಹಿಸಲಾಯಿತು. ಅಪಘಾತಕ್ಕೆ ನಿಖರವಾದ ಕಾರಣವನ್ನು ತನಿಖೆ ನಡೆಸಲಾಗುತ್ತಿದೆ, ಚಾಲಕನು ವಾಹನದ ನಿಯಂತ್ರಣವನ್ನು ಕಳೆದುಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆ ಹೇಳುತ್ತಿದೆ. ಪರಾರಿಯಾಗಿರುವ ಚಾಲಕನಿಗಾಗಿ ಪೊಲೀಸ್ ಅಧಿಕಾರಿಗಳು ಶೋಧ ಕಾರ್ಯಚರಣೆ ನಡೆಸುತ್ತಿದ್ದಾರೆ.










