ಒಪಿಎಸ್ ಅರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ – ಪಳನಿಸ್ವಾಮಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ.

47
firstsuddi

ಚೆನ್ನೈ: ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಚುನಾವಣೆಗೆ ತಡೆ ನೀಡಲು ಮದ್ರಾಸ್ ಹೈಕೋರ್ಟ್ ಇಂದು ತಿರಸ್ಕರಿಸಿದೆ. ಇದರ ಬೆನ್ನಲ್ಲೇ ಎಐಎಡಿಎಂಕೆ ತನ್ನ ಪ್ರಧಾನ ಕಾರ್ಯದರ್ಶಿಯಾಗಿ ಎಡಪ್ಪಾಡಿ ಪಳನಿಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.

ಒ ಪನ್ನೀರಸೆಲ್ವಂ ಮತ್ತು ಅವರ ಬೆಂಬಲಿಗರಾದ ಪಿಎಚ್ ಮನೋಜ್ ಪಾಂಡಿಯನ್, ಆರ್ ವೈಥಿಲಿಂಗಂ ಮತ್ತು ಜೆಸಿಡಿ ಪ್ರಭಾಕರನ್ ಪಕ್ಷದ ಚುನಾವಣೆಗಳಿಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ.

ಮದ್ರಾಸ್ ಹೈಕೋರ್ಟ್ ತೀರ್ಪಿನ ನಂತರ ಎಐಎಡಿಎಂಕೆ ಚುನಾವಣಾ ಆಯುಕ್ತರಾದ ನಾಥಮ್ ಆರ್ ವಿಶ್ವನಾಥನ್ ಮತ್ತು ಪೊಲ್ಲಾಚಿ ವಿ ಜಯರಾಮನ್ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ 68 ವರ್ಷದ ಪಳನಿಸ್ವಾಮಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿರುವುದಾಗಿ ಘೋಷಿಸಿದ್ದಾರೆ. ಪಕ್ಷದ ಪದಾಧಿಕಾರಿಗಳು ಅವರಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಅಭಿನಂದಿಸಿದರು.