ಓದಿನ ಕಡೆ ಗಮನಹರಿಸು ಎಂದು ಪೋಷಕರು ಬುದ್ದಿ ಹೇಳಿದಕ್ಕೆ ಮನನೊಂದು ಫುಟ್​​ಬಾಲ್ ಆಟಗಾರ ಆತ್ಮಹತ್ಯೆ…

44
firstsuddi

ಧಾರವಾಡ: ಓದಿನ ಕಡೆ ಗಮನಹರಿಸು ಎಂದು ಪೋಷಕರು ಹೇಳಿದ್ದಕ್ಕೆ ಮನನೊಂದು ಫುಟ್​​ಬಾಲ್ ಆಟಗಾರನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಸಾದನಕೇರಿ ಬಡಾವಣೆಯಲ್ಲಿ ನಡೆದಿದೆ.

ಮೃತನನ್ನು ಚೇತನ್ ತೊಂಡಿಹಾಳ ಎಂದು ಗುರುತಿಸಲಾಗಿದೆ. ಒಳ್ಳೆಯ ಫುಟ್​​ಬಾಲ್ ಆಟಗಾರ ಆಗಿದ್ದ ಚೇತನ್ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದನು. ನಾಲ್ಕು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಚೇತನ್, ಅದರಿಂದ ಹೊರ ಬರಲಾಗದೇ ಒದ್ದಾಡುತ್ತಿದ್ದನು. ಆತನ ಕುಟುಂಬಸ್ಥರು ಆತನಿಗೆ ಬೆಂಗಳೂರಿನ ಮಾನಸಿಕ ಆಸ್ಪತ್ರೆಯಲ್ಲೂ ಚಿಕಿತ್ಸೆ ಕೊಡಿಸಿದ್ದರು.

ಚೇತನ್​ಗೆ ಕ್ರೀಡೆಯಲ್ಲಿ ಹೆಚ್ಚು ಆಸಕ್ತಿ ಇತ್ತು. ಮಗನ ಆಸಕ್ತಿಯಿಂದಾಗಿ ಓದಿಗೆ ಸಮಸ್ಯೆ ಆಗಬಾರದೆಂದುಕೊಂಡ ಶರಣಪ್ಪ ಕೊಂಡಿಹಾಳ ಅವರು ತಮ್ಮ ಮಗನಿಗೆ ಬುದ್ಧಿ ಹೇಳಿದ್ದಾರೆ. ‘ಕ್ರೀಡೆಗೆ ಆಸಕ್ತಿ ಕಡಿಮೆ ಕೊಟ್ಟು, ಓದಿನ ಕಡೆ ಗಮನಹರಿಸು’ ಎಂದು ಹೇಳಿದ್ದಾರೆ. ಇಷ್ಟಕ್ಕೆ ಮನನೊಂದ ಚೇತನ್ ಮನೆಯಿಂದ ನಾಪತ್ತೆಯಾಗಿದ್ದ. ಈಗ ಎರಡು ದಿನಗಳ ನಂತರ ಕೆಲಗೇರಿ ಕೆರೆಯಲ್ಲಿ ಚೇತನ್ ಶವ ಪತ್ತೆಯಾಗಿದೆ.

ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.