ಓರ್ವ ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖ- ಚಾಮರಾಜನಗರ ಜಿಲ್ಲೆ ಮತ್ತೆ ಕೊರೊನಾ ಮುಕ್ತ…

138
firstsuddi

ಚಾಮರಾಜನಗರ : ಜಿಲ್ಲೆಯಲ್ಲಿ ದಾಖಲಾಗಿದ್ದ ಓರ್ವ ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ಮೂಲಕ ಚಾಮರಾಜನಗರ ಜಿಲ್ಲೆ ಮತ್ತೆ ಕೊರೊನಾ ಮುಕ್ತವಾಗಿದೆ. ಸೋಂಕಿತ ವ್ಯಕ್ತಿ ಜೂನ್. 9ರಂದು ತನ್ನ ತಾಯಿಯನ್ನು ಜಿಲ್ಲೆಯ ಹನೂರು ತಾಲ್ಲೂಕಿನ ತನ್ನ ಮಾವನ ಮನೆಗೆ ಬಿಡಲು ಬಂದಿದ್ದರು. ಈ ವೇಳೆ ವ್ಯಕ್ತಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಠಿಯಾಗಿತ್ತು. ಈಗಾ ಸೋಂಕಿತ ವ್ಯಕ್ತಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ಮೂಲಕ ಚಾಮರಾಜನಗರ ಮತ್ತೆ ಕೊರೊನಾ ಮುಕ್ತ ಜಿಲ್ಲೆಯಾಗಿದೆ.