ಕಂಠೀರವ ಸ್ಟುಡಿಯೋ ಆವರಣದಲ್ಲಿ ದಿ|| ಅಂಬರೀಷ್ ಅವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಅನುಮತಿ…

156
firstsuddi

ಬೆಂಗಳೂರು : ಕಂಠೀರವ ಸ್ಟುಡಿಯೋ ಆವರಣದಲ್ಲಿ ನಟ ದಿ|| ರೆಬೆಲ್ ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅನುಮತಿ ನೀಡಿದ್ದಾರೆ. ಸ್ಮಾರಕ ನಿರ್ಮಾಣ ಕುರಿತು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಕಂಠೀರವ ಸ್ಟುಡಿಯೂ ಆವರಣದಲ್ಲಿ ಸ್ಮಾರಕ ನಿರ್ಮಾಣ ಮಾಡಲು 1 ಎಕರೆ 34 ಗುಂಟೆ ಜಾಗ ಗುರುತಿಸಲಾಗಿದ್ದು, ರಾಜ್ಯ ಸರ್ಕಾರದಿಂದ 5 ಕೋಟಿ ರೂ ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಸಭೆಯಲ್ಲಿ ಸಂಸದೆ ಸುಮಲತಾ ಅಂಬರೀಷ್, ಪುತ್ರ ಅಭಿಷೇಕ್, ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ ಅವರು ಸೇರಿದಂತೆ ಮುಂತಾದವರು ಭಾಗಿಯಾಗಿದ್ದರು.
ಅಲ್ಲದೇ ಸಂಸದೆ ಸುಮಲತಾ ಅಂಬರೀಷ್ ಅವರು ತಮ್ಮ ಟ್ವಿಟರ್ ಮೂಲಕ ಸ್ಮಾರಕ ನೀಡಲು ಅನುಮತಿ ನೀಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.