ಕಂದಕಕ್ಕೆ ಉರುಳಿ ಬಿದ್ದ ಬಸ್ ; 27 ಮಂದಿ ಸಾವು…

102
firstsuddi

ಲಿಮಾ : ಕಂದಕಕ್ಕೆ ಬಸ್ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ 27 ಮಂದಿ ಮೃತಪಟ್ಟಿರುವ ಘಟನೆ ದಕ್ಷಿಣ ಪೆರುವಿಯನ್ ಪ್ರದೇಶದ ಅಯಾಕುಚೊದಲ್ಲಿ ನಡೆದಿದೆ.

ಬೆಳಗಿನ ಜಾವ ಸುಮಾರು ಮೂರು ಗಂಟೆ ವೇಳೆಗೆ ಅಯಾಕುಚೊ ಪ್ರದೇಶದಿಂದ ಅರೆಕ್ವಿಪಾಗೆ ಬಸ್ ಹೋಗುತ್ತಿರುವಾಗ ಸುಮಾರು 250 ಮೀಟರ್ ಆಳದ ಕಂದಕಕ್ಕೆ ಬಸ್ ಉರುಳಿದೆ.

ಪ್ರಾಥಮಿಕ ವರದಿ ಪ್ರಕಾರ, ಮೃತರೆಲ್ಲರು ವಾರಿ ಪಲೋಮಿನೋ ಎಂಬ ಕಂಪನಿ ಗಣಿ ಪ್ರದೇಶದಲ್ಲಿ ಕೆಲಸ ಮಾಡುವ ಕಾರ್ಮಿಕರು ಮತ್ತು ಅವರ ಕುಟುಂಬ ಸದಸ್ಯರು ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಹಲವಾರು ಮಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ರಕ್ಷಿಸಲು ರಕ್ಷಣಾ ತಂಡಗಳು, ಅಗ್ನಿಶಾಮಕ ದಳ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಸ್ಥಳೀಯ ಆಸ್ಪತ್ರೆಗೆ ಗಾಯಾಳುಗಳನ್ನು ರವಾನಿಸಿದ್ದಾರೆ.