ಕಂದಕಕ್ಕೆ ಉರುಳಿದ ವಾಹನ – 8 ಮಂದಿ ಅಯ್ಯಪ್ಪ ಭಕ್ತರು ಸಾವು…

74
firstsuddi

ತಿರುವನಂತಪುರಂ : ಶಬರಿಮಲೆಗೆ ಸಾಗುತ್ತಿದ್ದ ಯಾತ್ರಾರ್ಥಿಗಳಿದ್ದ ವಾಹನ ಕಂದಕಕ್ಕೆ ಉರುಳಿ ಬಿದ್ದು 8 ಮಂದಿ ಅಯ್ಯಪ್ಪ ಭಕ್ತರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಶಬರಿಮಲೆಗೆ ಹೋಗುವ ಕುಮಿಲಿ – ಕಂಬಂ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ.

ವಾಹನದಲ್ಲಿದ್ದ ಎಲ್ಲ ಪ್ರಯಾಣಿಕರು ಥೇಣಿ-ಅಂಡಿಪೆಟ್ಟಿ ನಿವಾಸಿಗಳಾಗಿದ್ದರು. ಅಪಘಾತ ಸಂಭವಿಸಿದಾಗ ವಾಹನದಲ್ಲಿ ಒಟ್ಟು 10 ಮಂದಿ ಇದ್ದರು ಎಂದು ಪೊಲೀಸರು ಹೇಳಿದ್ದಾರೆ.

ಅಪಘಾತದಲ್ಲಿ ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಸಾವನ್ನಪ್ಪಿದರು. ತೀವ್ರವಾಗಿ ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಪೈಕಿ 3 ವರ್ಷದ ಒಂದು ಮಗುವೂ ಸೇರಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.