ಕಚ್ಚಾ ಬಾಂಬ್ ಸ್ಪೋಟಗೊಂಡು ಇಬ್ಬರ ಸಾವು, ನಾಲ್ವರಿಗೆ ಗಾಯ…

201
firstsuddi

ಪಶ್ಚಿಮ ಬಂಗಾಳ : ನಿನ್ನೆ ರಾತ್ರಿ ಕಚ್ಚಾ ಬಾಂಬ್ ಸ್ಪೋಟಗೊಂಡು ಇಬ್ಬರು ಮೃತಪಟ್ಟು ನಾಲ್ವರು ಗಾಯಗೊಂಡಿರುವ ಘಟನೆ ಪಶ್ಚಮ ಬಂಗಾಳದ ಕಂಕಿನಾರ ಪ್ರದೇಶದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯ ಕಂಕಿನಾರ ಪ್ರದೇಶದಲ್ಲಿ ದುಷ್ಕರ್ಮಿಗಳು ಕಚ್ಚಾ ಬಾಂಬನ್ನು ಎಸೆದು ಪರಾರಿಯಾಗಿದ್ದು, ಇದರ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.