ಕಣಿವೆಗೆ ಉರುಳಿದ ಬಸ್ – ಶಾಲಾ ಮಕ್ಕಳು ಸೇರಿ 16 ಮಂದಿ ಸಾವು…

104
firstsuddi

ಶಿಮ್ಲಾ : ಖಾಸಗಿ ಬಸ್ಸೊಂದು ಕಣಿವೆಗೆ ಉರುಳಿ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ನಡೆದಿದೆ.

ಇಂದು ಬೆಳಗ್ಗೆ 8.30ರ ಸುಮಾರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಸ್ ಸೈನ್ಜ್ ಕಣಿವೆಯ ಶೆಂಶಾರ್ ನಿಂದ ಸೈನ್ಜ್ ಕಡೆಗೆ ಬರುತ್ತಿತ್ತು. ಈ ವೇಳೆ ಬಸ್ ಕಣಿವೆಗೆ ಉರುಳಿದೆ. ಹಲವರು ಗಾಯಗೊಂಡಿದ್ದು ಅವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಶಾಲಾ ಬಸ್ಸಿನಲ್ಲಿ 45 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಕುಲುವಿನಿಂದ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯಾದಲ್ಲಿ ತೊಡಗಿದೆ ಎಂದು ಕುಲು ಜಿಲ್ಲಾಧಿಕಾರಿ ಆಶುತೋಷ್ ಗಾರ್ಗ್ ತಿಳಿಸಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಕುಲುವಿನ ಸೈಂಜ್ ಕಣಿವೆಯಲ್ಲಿ ಖಾಸಗಿ ಬಸ್ ಕಣಿವೆಗೆ ಬಿದ್ದಿರುವ ಸುದ್ದಿ ತಿಳಿದು ಬಂದಿದೆ. ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ. ಅಗಲಿದ ಆತ್ಮಗಳಿಗೆ ಶಾಂತಿ ಹಾಗೂ ದುಃಖತಪ್ತ ಕುಟುಂಬಗಳಿಗೆ ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹಿಮಾಚಲ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ಟ್ವೀಟ್ ಮಾಡಿದ್ದಾರೆ.