ಕೇರಳದಲ್ಲಿ ಸಿಎಂ ಬಿಎಸ್‍ವೈ ಗೆ ಪ್ರತಿಭಟನೆ ಬಿಸಿ-ಇಂದೇ ರಾಜ್ಯಕ್ಕೆ ವಾಪಾಸ್…

202
firstsuddi

ತಿರುವನಂತಪುರಂ : ವಿಶೇಷ ಪೂಜೆ ಸಲ್ಲಿಸಲೆಂದು ಕೇರಳಕ್ಕೆ ತೆರಳಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಲ್ಲಿನ ಪ್ರತಿಭಟನೆಯ ಬಿಸಿ ತಟ್ಟಿದ್ದು, ಪೌರತ್ವ ತಿದ್ದುಪಡಿ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ವೇಳೆ ಪೊಲೀಸರು ಗುಂಡಿನ ದಾಳಿ ನಮಡೆಸಿದ್ದನ್ನು ಖಂಡಿಸಿ ಕೇರಳದ ಕಣ್ಣೂರಿನಲ್ಲಿ ಡಿವೈಎಫ್‍ಐ ಕಾರ್ಯಕರ್ತರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೆರಳುತ್ತಿದ್ದ ಕಾರನ್ನು ಅಡ್ಡಗಟ್ಟಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ಇಂದು ಮತ್ತು ನಾಳೆ ಕೇರಳದ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಆದರೆ ಕಣ್ಣೂರಿನಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಹೊರಡಬೇಕಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಇಂದು ರಾತ್ರಿಯೇ ಮಂಗಳೂರಿಗೆ ಆಗಮಿಸಿ ನಗರದ ಸರ್ಕ್ಯೂಟ್ ಹೌಸ್‍ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.