ಕನಸಿನ ರಾಣಿ ಮಾಲಾಶ್ರೀ ಪುತ್ರಿ ಬಣ್ಣದ ಲೋಕಕ್ಕೆ ಎಂಟ್ರಿ…

88
firstsuddi

ಕನ್ನಡ ಚಿತ್ರರಂಗದ ಕನಸಿನ ರಾಣಿ ಮಾಲಾಶ್ರೀಯವರ ಪುತ್ರಿ ರಾಧನಾ ರಾಮ್ ಬಣ್ಣದ ಲೋಕಕ್ಕೆ ಎಂಟ್ರಿ ಕೊಡ್ತಿದ್ದಾರೆ. ಹೌದು, ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ತರುಣ್ ಸುಧೀರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ದರ್ಶನ್ ಅವರ 56ನೇ ಚಿತ್ರಕ್ಕೆ ಮಾಲಾಶ್ರೀ ಪುತ್ರಿ ನಾಯಕಿ ಆಗಿ ಪದಾರ್ಪಣೆ ಮಾಡಲಿದ್ದಾರೆ. ಸದ್ಯ ಚಿತ್ರದ ರಾಧನಾ ಲುಕ್ ರಿವೀಲ್ ಆಗಿದ್ದು, ನಟಿಯ ಲುಕ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

ಈ ಬಗ್ಗೆ ಸ್ವತಃ ಮಾಲಾಶ್ರೀ ಅವರೇ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ನನ್ನ ಮುದ್ದಿನ ಮಗಳು ಇಂದು ನನಗೆ ಅಪಾರ ಪ್ರೀತಿ ಹಾಗೂ ಬದುಕು ನೀಡಿದ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾಳೆ. ನನಗೆ ನೀಡಿದ ಪ್ರೀತಿ ಮತ್ತು ಆಶೀರ್ವಾದ ಅವಳ ಮೇಲೂ ಇರಲಿ ಎಂದು ಆಶಿಸುತ್ತೇನೆ ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.